ಅರಣ್ಯಕಾಂಡ 9:12

ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 9

10ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.

11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.

12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.

13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

14ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.

ಅರಣ್ಯಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी