ಪ್ರಲಾಪಗಳು 1:11

ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 1

9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

11ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.

12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.

13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.

ಪ್ರಲಾಪಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी