ಎಜ್ರನು 8:32

ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.

ಸಂದರ್ಭದೊಂದಿಗೆ ಓದಿ · ಎಜ್ರನು 8

30ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.

31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.

32ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.

33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.

34ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.

ಎಜ್ರನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी