ಧರ್ಮೋಪದೇಶಕಾಂಡ 31:12

ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 31

10ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ

11ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.

12ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.

13ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.

14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.

ಧರ್ಮೋಪದೇಶಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी