೨ ಪೇತ್ರನು 2:6

ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 2

4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

7ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.

8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.

೨ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी