ಯೆರೆಮಿಯ 23:7

ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.

7ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.

8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.

9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी