೨ ಅರಸುಗಳು 20:9

ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 20

7ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.

8ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.

9ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.

10ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.

11ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.

೨ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी