ದಾನಿಯೇಲನು 9:5

ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.

4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,

5ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.

6ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.

7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी