೨ ಅರಸುಗಳು 15:12

ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 15

10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.

11ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

12ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.

13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.

14ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.

೨ ಅರಸುಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी