ರೋಮಾಪುರದವರಿಗೆ 12:18

ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 12

16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.

17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.

18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.

20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.

ರೋಮಾಪುರದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी