ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
38ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
40ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ