ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
37ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
39ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ