೨ ಅರಸುಗಳು 19:26

ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 19

24ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.

25ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.

26ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.

27ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.

28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.

೨ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी