ಮತ್ತಾಯನು 18:14

ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

12ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?

13ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.

14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी