ಯೆಶಾಯ 62:4

ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 62

2ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.

3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.

4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.

5ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.

6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.

ಯೆಶಾಯ 62 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी