ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
12ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
14ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ