೧ ಅರಸುಗಳು 8:63

ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.

62ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.

63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.

64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.

65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी