ಯಾಜಕಕಾಂಡ 6:18

ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 6

16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.

17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.

18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.

19ಕರ್ತನು ಮೋಶೆಯೊಡನೆ ಮಾತನಾಡಿ--

20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.

ಯಾಜಕಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी