ಆಮೋಸ 2:3

ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಆಮೋಸ 2

1ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.

2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.

3ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.

4ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.

5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.

ಆಮೋಸ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी