ಅಪೊಸ್ತಲರ ಕೃತ್ಯಗಳು 25:4

ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 25

2ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.

3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.

5ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.

6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.

ಅಪೊಸ್ತಲರ ಕೃತ್ಯಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी