ಯೆಹೆಜ್ಕೇಲನು 17:9

ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 17

7ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.

8ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.

9ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.

10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.

11ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--

ಯೆಹೆಜ್ಕೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी