ಯೆಹೋಶುವ 4:3

ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 4

1ಜನರೆಲ್ಲರು ಯೊರ್ದನನ್ನು ದಾಟಿ ಮುಗಿಸಿದಾಗ ಕರ್ತನು ಯೆಹೋಶುವ ನೊಂದಿಗೆ ಮಾತನಾಡಿ--

2ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು

3ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.

4ಆಗ ಯೆಹೋಶುವನು ಇಸ್ರಾ ಯೇಲ್‌ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.

5ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.

ಯೆಹೋಶುವ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी