ಯೆಹೆಜ್ಕೇಲನು 33:4

ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 33

2ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,

3ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,

4ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.

5ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.

6ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.

ಯೆಹೆಜ್ಕೇಲನು 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी