ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.
3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.
6ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ