೧ ಅರಸುಗಳು 22:8

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 22

6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.

8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.

9ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.

10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.

೧ ಅರಸುಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी