ಆದಿಕಾಂಡ 32:21

ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 32

19ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.

20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.

21ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.

22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್‌ ಎಂಬ ಸ್ಥಳದಲ್ಲಿ ದಾಟಿದನು.

23ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.

ಆದಿಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी