ಲೂಕನು 18:12

ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 18

10ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.

11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.

13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.

14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी