ಯಾಜಕಕಾಂಡ 23:14

ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

12ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.

13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.

14ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.

15ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.

16ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी