ಯಾಜಕಕಾಂಡ 3:2

ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 3

1ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.

2ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.

3ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

4ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.

ಯಾಜಕಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी