ಯೆಹೆಜ್ಕೇಲನು 27:14

ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 27

12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.

13ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.

14ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.

15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.

16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಯೆಹೆಜ್ಕೇಲನು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी