ಅಪೊಸ್ತಲರ ಕೃತ್ಯಗಳು 9:7

ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 9

5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.

6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.

8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;

9ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.

ಅಪೊಸ್ತಲರ ಕೃತ್ಯಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी