ಯೆರೆಮಿಯ 8:3

ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 8

1ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.

2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.

3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

4ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?

5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.

ಯೆರೆಮಿಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी