ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
27ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
29ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
30ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
31ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ