ನ್ಯಾಯಸ್ಥಾಪಕರು 16:23

ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 16

21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.

22ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.

23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.

24ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.

25ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.

ನ್ಯಾಯಸ್ಥಾಪಕರು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी