ಯೋಹಾನನು 9:25

ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 9

23ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.

24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.

25ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.

26ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ

27ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.

ಯೋಹಾನನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी