ಯೆಹೋಶುವ 11:5

ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 11

3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್‌ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.

4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.

5ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.

6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.

7ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.

ಯೆಹೋಶುವ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी