ಯಾಜಕಕಾಂಡ 3:10

ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 3

8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.

9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

10ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.

11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.

12ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.

ಯಾಜಕಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी