ಕೀರ್ತನೆಗಳು 57:1

ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 57

1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.

2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.

3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.

ಕೀರ್ತನೆಗಳು 57 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी