ಯಾಜಕಕಾಂಡ 6:16

ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 6

14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.

15ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.

16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.

17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.

18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.

ಯಾಜಕಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी