ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
14ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
15ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
16ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ