ಅರಣ್ಯಕಾಂಡ 22:15

ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

13ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,

14ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.

15ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.

16ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.

17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी