ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
18ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
22ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ