ವಿಮೋಚನಕಾಂಡ 14:9

ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 14

7ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.

8ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.

9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.

10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.

11ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?

ವಿಮೋಚನಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी