ಯಾಜಕಕಾಂಡ 23:16

ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

14ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.

15ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.

16ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.

17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.

18ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी