೨ ಅರಸುಗಳು 19:2

ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 19

1ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.

2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.

3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.

4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.

೨ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी