ಯೆಹೆಜ್ಕೇಲನು 31:8

ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 31

6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.

7ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.

8ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.

9ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.

10ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.

ಯೆಹೆಜ್ಕೇಲನು 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी