ಅರಣ್ಯಕಾಂಡ 18:20

ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 18

18ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.

19ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.

20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.

21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.

22ಇಸ್ರಾಯೇಲ್‌ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.

ಅರಣ್ಯಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी