ಯೆರೆಮಿಯ 51:27

ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್‌, ಮಿನ್ನಿ, ಅಷ್ಕೆನಜ್‌ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.

26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.

27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್‌, ಮಿನ್ನಿ, ಅಷ್ಕೆನಜ್‌ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.

28ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.

29ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी