ಅಪೊಸ್ತಲರ ಕೃತ್ಯಗಳು 9:18

ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 9

16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.

18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.

19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.

20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.

ಅಪೊಸ್ತಲರ ಕೃತ್ಯಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी