ಯೆಹೆಜ್ಕೇಲನು 45:11

ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 45

9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

10ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್‌ (ಅಳತೆ) ನಿಮಗಿರಬೇಕು.

11ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.

12ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.

13ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,

ಯೆಹೆಜ್ಕೇಲನು 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी